ಕ್ರೀಡೆ

ಏಷ್ಯಾಕಪ್’ಗೆ ಬಲಿಷ್ಠ ಭಾರತ ತಂಡ ಪ್ರಕಟ: ಕೆ.ಎಲ್ ರಾಹುಲ್ ಕಂಬ್ಯಾಕ್

ಮುಂಬರುವ ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಕೆಲ ಸ್ಟಾರ್ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್​ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.

ದೆಹಲಿಯಲ್ಲಿ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಭಾರತೀಯ ಆಯ್ಕೆಗಾರರ ​​ಸಭೆ ನಡೆದಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜೊತೆಗೆ ನಾಯಕ ರೋಹಿತ್ ಶರ್ಮಾ ಕೂಡ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗಿಯಾಗಿದ್ದರು.

17 ಸದಸ್ಯರ ತಂಡದಲ್ಲಿ ಪರಿಪೂರ್ಣ ಸ್ಪಿನ್ನರ್ ಆಗಿ ಸ್ಥಾನ ಪಡೆದಿರುವುದು ಕುಲ್ದೀಪ್ ಯಾದವ್ ಮಾತ್ರ. ಇನ್ನು ಸ್ಪಿನ್ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ. ಇದರ ಜೊತೆಗೆ ಕೆ.ಎಲ್ ರಾಹುಲ್ ಕಂಬ್ಯಾಕ್ ಮಾಡಿದ್ದಾರೆ.

ಏಷ್ಯಾಕಪ್​ಗೆ ಆಯ್ಕೆಯಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ಭಾಗವಹಿಸುತ್ತಿವೆ.

 

 

Ashitha S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

30 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

46 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago