ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗಿಲ್ಲ. ಇನ್ನು ಎಂದಿನಂತೆ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.
ಹಾಗೆಯೇ ಇದೇ ಮೊದಲ ಬಾರಿಗೆ ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಅಬ್ಬರಿಸಿದ್ದರು. ಇದೀಗ ಈ ಇಬ್ಬರು ಎಡಗೈ ದಾಂಡಿಗರು ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಸ್ಥಾನದಲ್ಲಿ ತಂಡಕ್ಕೆ ಕಂಬ್ಯಾಕ್ ಮಾಡಿದ್ದರೆ, ಸೂರ್ಯಕುಮಾರ್ ಯಾದವ್ಗೆ ಉಪನಾಯಕನ ಸ್ಥಾನ ನೀಡಲಾಗಿದೆ. ಮತ್ತೊಂದೆಡೆ ಈ ಸರಣಿಗೆ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ. ಹಾಗೆಯೇ ಗಾಯದ ಕಾರಣ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
ಭಾರತ ಟಿ20 ತಂಡ : ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.