Ad

ವಿಶ್ವಕಪ್‌ನೊಂದಿಗೆ ಭಾರತಕ್ಕೆ ಬಂದಿಳಿದ ಇಂಡಿಯಾ ಟೀಮ್‌

ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ ಏರ್​ ಇಂಡಿಯಾ ಚಾರ್ಟರ್ಡ್​ ಫ್ಲೈಟ್​ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿಗಳು ಹಾಗೂ ಕುಟುಂಬಸ್ಥರು ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

300x250 2

ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಹೋಟೆಲ್​ಗೆ ತೆರಳಿದ್ದು, ಬೆಳಗ್ಗೆ 11 ಗಂಟೆಗೆ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.

ಭಾರತ ತಂಡವು ಮುಂಜಾನೆ ಆಗಮಿಸಿದರೂ, ಏರ್​ಪೋರ್ಟ್​ನಲ್ಲಿ ಟೀಮ್ ಇಂಡಿಯಾವನ್ನು ಸ್ವಾಗತಿಸಲು ಅಭಿಮಾನಿಗಳು ಜಮಾಯಿಸಿದ್ದರು. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಘೋಷಣೆಗಳೊಂದಿಗೆ ಭಾರತ ತಂಡವನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದೀಗ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Ad
Ad
Nk Channel Final 21 09 2023
Ad