News Karnataka Kannada
Saturday, May 11 2024
ಕ್ರೀಡೆ

ಜುಲೈ 12 ರಿಂದ ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ ಪಂದ್ಯ ಆರಂಭ

IND vs WI Series
Photo Credit : News Kannada

ಭಾರತ ಕ್ರಿಕೆಟ್ ತಂಡ ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಲು ಸಜ್ಜಾಗಿ ನಿಂತಿದೆ. ಈ ವಾರದ ಅಂತ್ಯದಲ್ಲಿ ಟೀಮ್ ಇಂಡಿಯಾದ ಒಂದು ಬ್ಯಾಚ್ ವೆಸ್ಟ್ ಇಂಡೀಸ್ ಹೊರಲಿದೆ. ಜುಲೈ 12 ರಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿಗೆ ಚಾಲನೆ ಸಿಗಲಿದೆ.

ಆರಂಭದಲ್ಲಿ ಟೀಮ್ ಇಂಡಿಯಾ ವಿಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯವನ್ನು ಆಡಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಜುಲೈ 12 ರಿಂದ 16 ವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಬಳಿಕ ಜುಲೈ 20ರಿಂದ 24ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಅಲ್ಲಿನ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ ಆಡಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು