News Karnataka Kannada
Saturday, May 04 2024
ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಟಿ20: 4-1 ಅಂತರದಿಂದ ಸರಣಿ ಗೆದ್ದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಒಮ್ಮೆ ಆಸ್ಟ್ರೇಲಿಯಾ, ಮತ್ತೊಮ್ಮೆ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು.
Photo Credit : News Kannada

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಒಮ್ಮೆ ಆಸ್ಟ್ರೇಲಿಯಾ, ಮತ್ತೊಮ್ಮೆ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು.

ಅಂತಿಮ ಓವರ್‌ನಲ್ಲಿ 10 ರನ್ ಅವಶ್ಯಕತೆ ಇತ್ತು. ನಾಯಕ ಮ್ಯಾಥ್ಯೂ ವೇಡ್ ವಿಕೆಟ್ ಕಬಳಿಸುವ ಮೂಲಕ ಭಾರತ 6 ರನ್ ರೋಚಕ ಗೆಲುವು ಕಂಡಿತು. ಇದರೊಂದಿಗೆ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿತು.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆಸ್ಟ್ರೇಲಿಯಾಕ್ಕೆ ಗೆಲ್ಲಲು 161 ರನ್‌ಗಳ ಗುರಿ ನೀಡಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 154 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 4-1 ಅಂತರದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು ವಶಪಡಿಸಿಕೊಂಡಿತು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು