News Karnataka Kannada
Sunday, May 05 2024
ಕ್ರೀಡೆ

ಭಾರತ -ಆಸ್ಟ್ರೇಲಿಯಾ ಹೈವೋಲ್ಟೇಜ್‌ ಪಂದ್ಯ: ಆಸ್ಟ್ರೇಲಿಯಾಕ್ಕೆ 241 ರನ್‌ ಗುರಿ ನೀಡಿದ ಟೀಂ ಇಂಡಿಯಾ

India vs Australia: India set 241-run target for Australia in high-voltage match
Photo Credit : News Kannada

ಅಹಮದಾಬಾದ್‌: ಅಹಮದಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿದೆ.

ಈ ಮೂಲಕ ಆಸೀಸ್ ತಂಡಕ್ಕೆ ಗೆಲ್ಲಲು 241 ರನ್​ಗಳ ಟಾರ್ಗೆಟ್ ನೀಡಿದೆ. ಹಾಗೆಯೇ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಆಲೌಟ್ ಆದ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 54 ರನ್ ಮತ್ತು ಕೆಎಲ್ ರಾಹುಲ್ 66 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ 31 ಎಸೆತಗಳಲ್ಲಿ 47 ರನ್ ಗಳಿಸಿ ಭಾರತಕ್ಕೆ ವೇಗದ ಆರಂಭ ನೀಡಿದರಾದರೂ ಉಳಿದ ಆಟಗಾರರಿಗೆ ಆವೇಗವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು