News Karnataka Kannada
Friday, May 17 2024
ಕ್ರೀಡೆ

ಏಷ್ಯಾಕಪ್ ಫೈನಲ್​ನಲ್ಲಿ ಭಾರತ- ಬಾಂಗ್ಲಾ ಮುಖಾಮುಖಿ

India vs Bangladesh
Photo Credit : Wikipedia

ಮಹಿಳಾ ಉದಯೋನ್ಮುಖ ಏಷ್ಯಾ ಕಪ್ 2023: ಇಂದು ನಡೆಯಲಿರುವ ಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. ಈ ಪಂದ್ಯ ಇಂದು 11 ಗಂಟೆಗೆ ಆರಂಭವಾಗಲಿದೆ. ಮಹಿಳೆಯರ ಉದಯೋನ್ಮುಖ ಏಷ್ಯಾಕಪ್​ನಲ್ಲಿ ಇದುವರೆಗೆ ಮಳೆಯ ಆಟವೇ ಹೆಚ್ಚು ನಡೆದಿದೆ. ಗುಂಪು ಹಂತದ ಬಹುತೇಕ ಪಂದ್ಯಗಳು ಮಳೆಯಿಂದ ರದ್ದಾದವು. ಹೀಗಾಗಿ ಭಾರತ ಮಹಿಳಾ ಕ್ರಿಕೆಟ್ ತಂಡ ಕೇವಲ ಒಂದು ಪಂದ್ಯವನ್ನು ಆಡಿ ಸೆಮಿಫೈನಲ್ ಪ್ರವೇಶಿಸಿತ್ತು.

ಸೋಮವಾರ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಒಂದೇ ಒಂದು ಪಂದ್ಯ ನಡೆಯಲಿಲ್ಲ. ಮಂಗಳವಾರ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಬೇಕಿತ್ತು. ಆ ಪಂದ್ಯವೂ ಮಳೆಯಿಂದ ರದ್ದಾಯಿತು. ಹೀಗಾಗಿ ಗುಂಪಿನಲ್ಲಿ ಅತ್ಯುತಮ ರನ್ ರೇಟ್ ಹೊಂದಿದ್ದ ಭಾರತ ಸೀದಾ ಫೈನಲ್‌ಗೆ ಎಂಟ್ರಿಕೊಟ್ಟಿದೆ. ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಿದ್ದವು. ಮಳೆ ಪೀಡಿತ ಈ ಪಂದ್ಯದಲ್ಲಿ ಪಾಕ್ ತಂಡವನ್ನು ಮಣಿಸಿದ ಬಾಂಗ್ಲಾದೇಶ ಇದೀಗ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ. ಬಾಂಗ್ಲಾ ಎದುರು 6 ರನ್​ಗಳಿಂದ ಸೋತ ಪಾಕ್ ಟೂರ್ನಿಯಿಂದ ಹೊರಬಿದ್ದಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು