Categories: ಕ್ರೀಡೆ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಚೀನಾ ವಿರುದ್ಧ ಗೆದ್ದು ಬೀಗಿದ ಭಾರತ ಹಾಕಿ ತಂಡ

ತಮಿಳುನಾಡು: ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

ಭಾರತದ ಪರ ಹರ್ಮನ್‌ಪ್ರೀತ್ 5 ಮತ್ತು 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ವರುಣ್ ಕುಮಾರ್ 19 ಮತ್ತು 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ದಾಖಸಿದರು. ಹೀಗಾಗಿ ವಿರಾಮದ ವೇಳೆಗೆ ಭಾರತ ತಂಡ 6 ಗೋಲುಗಳಿಂದ ಮುನ್ನಡೆ ಸಾಧಿಸಿತು.

ಭಾರತ ತಂಡದ ಪರ ಸುಖಜಿತ್ ಸಿಂಗ್ 15ನೇ ನಿಮಿಷದಲ್ಲಿ, ಆಕಾಶದೀಪ್ ಸಿಂಗ್ 16ನೇ ನಿಮಿಷದಲ್ಲಿ ಮತ್ತು ಮನ್​ದೀಪ್ ಸಿಂಗ್ 40ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಆಕಾಶದೀಪ್ ಅವರ ಫೀಲ್ಡ್ ಗೋಲ್ ಹೊರತುಪಡಿಸಿ ಭಾರತದ ಎಲ್ಲಾ ಗೋಲುಗಳು ಪೆನಾಲ್ಟಿ ಕಾರ್ನರ್‌ಗಳಿಂದ ಬಂದವು. ಅಂದರೆ ಪೆನಾಲ್ಟಿ ಕಾರ್ನರ್‌ಗಳಿಂದ 6 ಗೋಲುಗಳು ಬಂದವು. ಇದರೊಂದಿಗೆ ಮನ್​ದೀಪ್ ಸಿಂಗ್ ತಮ್ಮ ವೃತ್ತಿ ಜೀವನದಲ್ಲಿ 100 ಗೋಲುಗಳನ್ನು ಪೂರೈಸಿದರು.

ಅಂತಿಮವಾಗಿ ಈ ಪಂದ್ಯವನ್ನು ಭಾರತ ತಂಡ 7-2 ಗೋಲುಗಳಿಂದ ಗೆದ್ದುಕೊಂಡಿತು. ಇಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಜಪಾನ್‌ ತಂಡವನ್ನು ಎದುರಿಸಲಿದೆ.

Ashitha S

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

15 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

34 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

35 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

37 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

50 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

59 mins ago