ವಿಶಾಖಪಟ್ಟಣಂ: ವೈಜಾಗ್ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.
ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಮ್ಯಾಚ್ ಗೆದ್ದಿರುವ ಆಂಗ್ಲರು 1-0 ಮುನ್ನಡೆಯಲ್ಲಿದ್ದರೆ, ಟೀಮ್ ಇಂಡಿಯಾ ಕಮ್ಬ್ಯಾಕ್ ಮಾಡುವ ಯೋಜನೆಯಲ್ಲಿದೆ.
ಇನ್ನು ಟೀಮ್ ಇಂಡಿಯಾದಲ್ಲಿ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಜಾಗಕ್ಕೆ ಹೊಸ ಆಟಗಾರರ ಎಂಟ್ರಿ ಆಗಿದೆ. ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ರಜತ್ ಪಟಿದಾರ್ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪಿನ್ ವಿಭಾಗವನ್ನು ಆರ್. ಅಶ್ವಿನ್ ಮುನ್ನಡೆಸಲಿದ್ದಾರೆ.
ಇಂಗ್ಲೆಂಡ್ ತಂಡದಲ್ಲಿ ಯುವ ಸ್ಪಿನ್ನರ್ ಶೊಯೆಬ್ ಬಶೀರ್ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ.
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮುಖೇಶ್ ಕುಮಾರ್.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್.