News Karnataka Kannada
Tuesday, May 07 2024
ಕ್ರೀಡೆ

ಏಷ್ಯಾಕಪ್ 2023: ಟೀಮ್ ಇಂಡಿಯಾದ 2ನೇ ವಿಕೆಟ್ ಪತನ, ಪಂದ್ಯ ಸ್ಥಗಿತ

Team India (1)
Photo Credit : News Kannada

ಕೊಲಂಬೊ: ಏಷ್ಯಾಕಪ್​ನ ಸೂಪರ್ ಫೋರ್ ಹಂತದ 3ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡುತ್ತಿದೆ.

ಆದರೆ 25ನೇ ಓವರ್​ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ಮೈದಾನವನ್ನು ಕವರ್​ಗಳಿಂದ ಮುಚ್ಚಲಾಗಿದೆ. 24.1 ಓವರ್ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 147 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (17) ಹಾಗೂ ವಿರಾಟ್ ಕೊಹ್ಲಿ (8) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಶಾಹೀನ್ ಅಫ್ರಿದಿಯ ಸ್ಲೋ ಎಸೆತದಲ್ಲಿ ಫ್ರಂಟ್ ಫೀಲ್ಡರ್​ಗೆ ಸುಲಭ ಕ್ಯಾಚ್ ನೀಡಿದ ಶುಭ್​ಮನ್ ಗಿಲ್ 52 ಎಸೆತಗಳಲ್ಲಿ 10 ಫೋರ್​​ಗಳೊಂದಿಗೆ 58 ರನ್ ಬಾರಿಸಿ ಶುಭ್​ಮನ್ ಗಿಲ್ ನಿರ್ಗಮಿಸಿದರು. 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 56 ರನ್ ಬಾರಿಸಿ ಶಾದಾಬ್ ಖಾನ್ ಎಸೆತದಲ್ಲಿ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು