ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ 2024 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.
ಈ ಪಂದ್ಯವು ಅಮೆರಿಕ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಲ್ಲಿ ಡೇ ಪಂದ್ಯವಾಗಿದ್ದರೂ, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯದ ನೇರ ಪ್ರಸಾರ ಇರಲಿದೆ.
ಐರ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ಪಾಕ್ ವಿರುದ್ಧ ಗೆದ್ದು ಸೂಪರ್-8 ಹಂತಕ್ಕೆ ಲಗ್ಗೆಯಿಡುವ ಉತ್ಸಾಹದಲ್ಲಿದೆ. ಆದ್ರೆ ಪಾಕ್ ಸೂಪರ್-8 ಪ್ರವೇಶಿಸಲು ಈ ಗೆಲುವು ನಿರ್ಣಾಯಕವೂ ಆಗಿದ್ದು, ಪಾಕ್ ತಂಡಕ್ಕೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್ವರ್ಕ್ನ ಬಹುತೇಕ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಡಿಸ್ನಿ ಹಾಟ್ಸ್ಟಾರ್ನ ವೆಬ್ ಸೈಟ್ನಲ್ಲೂ ವೀಕ್ಷಿಸಬಹುದು.
2007ರಿಂದ ಈವರೆಗೆ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕ್ ಎದುರು ಸೋಲನ್ನೇ ಕಂಡಿಲ್ಲ. ಏಷ್ಯಾಕಪ್ ಟೂರ್ನಿಯಲ್ಲಿ ಮಾತ್ರ ಸೋಲು ಕಂಡಿದೆ. 2007ರಿಂದ ಈವರೆಗೆ ನಡೆದ 12 ಟಿ20ಐ ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳಲ್ಲಿ ಮಾತ್ರ ಪಾಕಿಸ್ತಾನ ಗೆದ್ದಿದ್ದರೆ, ಟೀಂ ಇಂಡಿಯಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.