Bengaluru 17°C

ಭಾರತ vs ಶ್ರೀಲಂಕಾ ಮೂರನೇ ಏಕದಿನ ಪಂದ್ಯ; ಮತ್ತೆ ಟಾಸ್ ಗೆದ್ದ ಲಂಕಾ

Odi Toss

ಕೊಲಂಬೊ: ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ಮತ್ತೊಂದು ರೋಚಕ ಪಂದ್ಯ ನಡೆಯುತ್ತಿದೆ.


ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶ್ರೀಲಂಕಾಕ್ಕಿಂತ ಟೀಂ ಇಂಡಿಯಾಗೆ ಈ ಪಂದ್ಯ ಮಹತ್ವದ್ದಾಗಿದೆ. ಏಕೆಂದರೆ ಸರಣಿ ಸೋಲಿನ ಆಘಾತವನ್ನು ತಪ್ಪಿಸಿಕೊಳ್ಳಬೇಕಾದರೆ, ಕೊನೆಯ ಪಂದ್ಯವನ್ನಾದರೂ ಟೀಂ ಇಂಡಿಯಾ ಗೆಲ್ಲಲೇಬೇಕಾಗಿದೆ.


ಇನ್ನು ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿರುವ ಆತಿಥೇಯ ಶ್ರೀಲಂಕಾ ಕೊನೆಯ ಪಂದ್ಯವನ್ನು ಗೆದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಈಗಾಗಲೇ ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಶ್ರೀಲಂಕಾ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.


ಹೀಗಾಗಿ ಕಳೆದ ಎರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಭಾರತ ಮೊದಲು ಬೌಲಿಂಗ್ ಮಾಡಬೇಕಾಗಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ.


Nk Channel Final 21 09 2023