News Karnataka Kannada
Friday, May 10 2024
ಕ್ರೀಡೆ

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ

Team India
Photo Credit : Twitter

ಚೆನ್ನೈ: ಏಕದಿನ ವಿಶ್ವಕಪ್​ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ 49.3 ಓವರ್​ಗಳಲ್ಲಿ 199 ರನ್​ಗಳಿಸಿ ಆಸ್ಟ್ರೇಲಿಯಾ ಆಲೌಟ್ ಆಯಿತು. 200 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆಸೀಸ್ ವೇಗಿಗಳು ಆರಂಭಿಕ ಆಘಾತ ನೀಡಿದರು.

ಬಳಿಕ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅದ್ಭುತ ಜೊತೆಯಾಟವಾಡಿದರು. 4ನೇ ವಿಕೆಟ್​ಗೆ 165 ರನ್ ಪೇರಿಸಿದ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ 85 ರನ್ ಬಾರಿಸಿದ್ದ ಕೊಹ್ಲಿ ಔಟಾದರು. ಇದಾಗ್ಯೂ ಅಜೇಯ 97 ರನ್ ಬಾರಿಸುವ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು 41.2 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲೇ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು