Bengaluru 26°C
Ad

ವನಿತಾ ಟಿ20 ವಿಶ್ವಕಪ್‌ : ಲಂಕಾ ವಿರುದ್ಧ ಗೆದ್ದು ಬೀಗಿದ ಭಾರತ

ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತೀಯ ವನಿತೆಯರು ಬುಧವಾರ ನಡೆದ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 82 ರನ್ನುಗಳಿಂದ ಸೋಲಿಸಿ ಸಂಭ್ರಮಿಸಿದೆ.

ದುಬಾೖ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತೀಯ ವನಿತೆಯರು ಬುಧವಾರ ನಡೆದ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 82 ರನ್ನುಗಳಿಂದ ಸೋಲಿಸಿ ಸಂಭ್ರಮಿಸಿದೆ.

ಅಗ್ರ ಕ್ರಮಾಂಕದ ಆಟಗಾರ್ತಿಯರ ಅಮೋಘ ಆಟದಿಂದಾಗಿ ಭಾರತೀಯ ವನಿತೆಯರು ಮೂರು ವಿಕೆಟಿಗೆ 172 ರನ್ನುಗಳ ಉತ್ತಮ ಮೊತ್ತ ಪೇರಿಸಿದರೆ ಶ್ರೀಲಂಕಾ ಆಟಗಾರ್ತಿಯರು ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ 19.5 ಓವರ್‌ಗಳಲ್ಲಿ ಕೇವಲ 90 ರನ್ನಿಗೆ ಆಲೌಟಾಗಿ ಸೋಲನ್ನು ಕಂಡಿತು.ಈ ಗೆಲುವಿನಿಂದ ಭಾರತ ಆಡಿದ ಮೂರು ಪಂದ್ಯಗಳಿಂದ ನಾಲ್ಕು ಅಂಕ ಗಳಿಸಿ ಮುಂದಿನ ಸುತ್ತಿಗೇರುವ ಅವಕಾಶವನ್ನು ಹೆಚ್ಚಿಸಿಕೊಂಡಿತು. ಭಾರತ ಮುಂದಿನ ಪಂದ್ಯದಲ್ಲಿ ಅ. 13ರಂದು ಬಲಿಷ್ಠ ಆಸ್ಟ್ರೇಲಿಯವನ್ನು ಎದುರಿಸಲಿದೆ.

 

Ad
Ad
Nk Channel Final 21 09 2023