ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನ ಮಹಿಳಾ ತಂಡದ ವಿರುದ್ಧ 6 ವಿಕೆಟ್‌ಗಳ ಅಮೋ ಗೆಲುವು ಸಾಧಿಸಿದೆ.

ಇದರೊಂದಿಗೆ ಟಿ20 ವಿಶ್ವಕಪ್‌ ಪ್ರಸಕ್ತ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದು ಸೆಮಿಸ್‌ ಕನಸು ಜೀವಂತವಾಗಿರಿಸಿಕೊಂಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 105 ರನ್‌ ಗಳಿಸಿತ್ತು. ಅಲ್ಪಮೊತ್ತದ ಗುರಿ ಬೆನ್ನಟ್ಟಿದ್ದ ಭಾರತ 18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಗೆಲುವು ಸಾಧಿಸಿದೆ.