Ad

ಭಾರತಕ್ಕೆ 4ನೇ ಪದಕ : ಹಾಕಿಯಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ಸ್ಪೇನ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ಸ್ಪೇನ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದೆ. ಕಳೆದ ಬಾರಿಯ ಅಂದರೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡ ಜರ್ಮನಿಯನ್ನು ಮಣಿಸಿ ಕಂಚಿನ ಪದಕ ಗೆದ್ದಿತ್ತು. ತೀವ್ರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾ 2-1 ಗೋಲುಗಳಿಂದ ಸ್ಪೇನ್ ತಂಡವನ್ನು ಸೋಲಿಸಿತು.

ಒಲಿಂಪಿಕ್ ಹಾಕಿ ಇತಿಹಾಸದಲ್ಲಿ ಭಾರತವು ಅತ್ಯಂತ ಯಶಸ್ವಿ ತಂಡ. ಪುರುಷರ ತಂಡವು ಎಂಟು ಚಿನ್ನ ಸೇರಿದಂತೆ 12 ಪದಕಗಳನ್ನು ಗೆದ್ದಿದೆ. ಕೊನೆಯ ಚಿನ್ನದ ಪದಕ 1980ರಲ್ಲಿ ಬಂದಿತು. ನಂತರ ತಂಡವು 41 ವರ್ಷಗಳ ಪದಕ ಬರವನ್ನು ಎದುರಿಸಿತು. ಟೋಕಿಯೊದಲ್ಲಿ ನಡೆದ 2020 ರ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು.

ಗೋಲ್ ಕೀಪರ್ ಶ್ರೀಜೇಶ್​ಗೆ ಉತ್ತಮ ವಿದಾಯ

ಒಲಿಂಪಿಕ್ಸ್ ಉದ್ದಕ್ಕೂ ಭಾರತಕ್ಕೆ ಗೆಲುವಿನಲ್ಲಿ ನೆರವಾಗಿದ್ದು ಗೋಲ್ ಕೀಪರ್​ ಶ್ರೀಜೇಶ್​. ಹೀಗಾಗಿ ಈ ಪದಕದೊಂದಿಗೆ ಅವರಿಗೆ ಉತ್ತಮ ವಿದಾಯ ದೊರಕಿದೆ. ಒಲಿಂಪಿಕ್ಸ್​ ಆರಂಭಕ್ಕೆ ಮುನ್ನವೇ ಅವರು ಇದು ನನಗೆ ಕೊನೇ ಅಂತಾರಾಷ್ಟ್ರೀಯ ಟೂರ್ನಿ ಎಂದು ಹೇಳಿದ್ದರು. ಹೀಗಾಗಿ ಅವರು ಇಲ್ಲಿಗೆ ತಮ್ಮ ವೃತ್ತಿ ಕ್ರೀಡೆಯನ್ನು ಮುಗಿಸಲಿದ್ದಾರೆ. ಹೀಗಾಗಿ ತಂಡದ ಆಟಗಾರರು ಅವರಿಗೆ ಉತ್ತಮ ವಿದಾಯ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023