News Karnataka Kannada
Sunday, May 12 2024
ಕ್ರೀಡೆ

ಐಬಿಎಸ್‍ಎ ವರ್ಲ್ಡ್ ಗೇಮ್ಸ್​ನಲ್ಲಿ ಭಾರತ ಪುರುಷರ ಅಂಧರ ಕ್ರಿಕೆಟ್ ತಂಡಕ್ಕೆ ಬೆಳ್ಳಿ ಪದಕ

Indian men's blind cricket team wins silver medal at IBSA World Games
Photo Credit : IANS

ಇಂಗ್ಲೆಂಡ್:  ಆಗಸ್ಟ್ 26ರ ಶನಿವಾರದಂದು ನಡೆದ ಐಬಿಎಸ್‍ಎ ವರ್ಲ್ಡ್ ಗೇಮ್ಸ್ 2023ರ ಪುರುಷರ ಟಿ20 ಕ್ರಿಕೆಟ್ ಈವೆಂಟ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲನುಭವಿಸಿದ ಭಾರತ ಪುರುಷರ ಅಂಧರ ಕ್ರಿಕೆಟ್ ತಂಡ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 184 ರನ್​ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿತ್ತಾದರೂ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಹೀಗಾಗಿ ಇದೇ ಪಾಕ್ ವಿರುದ್ಧ ಲೀಗ್ ಹಂತದಲ್ಲಿ ಸೋತಿದ್ದ ಭಾರತ, ಫೈನಲ್ ಪಂದ್ಯದಲ್ಲಿ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.

ಅಂತಿಮವಾಗಿ ಭಾರತ ತಂಡವನ್ನು ಮಣಿಸಿದ ಪಾಕಿಸ್ತಾನ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತು.

ಆದರೆ ಮಹಿಳಾ ಅಂಧರ ಕ್ರಿಕೆಟ್​ ಫೈನಲ್​ನಲ್ಲಿ ಭರ್ಜರಿ ಜಯ ಸಾಧಿಸಿ ಭಾರತೀಯ ವನಿತೆಯರು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 9 ವಿಕೆಟ್​ಗಳಿಂದ ಗೆಲ್ಲುವ ಮೂಲಕ ಭಾರತ ತಂಡ ಈ ಸಾಧನೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು