Ad

ಪ್ಯಾರಿಸ್ ಒಲಿಂಪಿಕ್ಸ್‌ಗೆ 16 ಸದಸ್ಯರ ಭಾರತ ಹಾಕಿ ತಂಡ ಪ್ರಕಟ

Hakcy

ದೆಹಲಿ: ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಅಂದರೆ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ 5 ಹೊಸ ಆಟಗಾರರು ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಟೀಂ ಇಂಡಿಯಾದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಜುಲೈ 26 ರಿಂದ ಪ್ರಾರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್​ಗೆ ಆಗಸ್ಟ್ 11 ರಂದು ತೆರೆ ಬೀಳಲಿದೆ. ಕಳೆದ ಬಾರಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

Ad
300x250 2

ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಅಂದರೆ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ 5 ಹೊಸ ಆಟಗಾರರು ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಟೀಂ ಇಂಡಿಯಾದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಸ್ತುತ ಅಯ್ಕೆಯಾಗಿರುವ ಹಾಕಿ ತಂಡದಲ್ಲಿ ಪ್ರಮುಖವಾಗಿ ಐದು ಆಟಗಾರರು ಇದೇ ಮೊದಲ ಬಾರಿಗೆ ಒಲಿಂಪಿಕ್ಸ್​ನಲ್ಲಿ ಆಡಲಿದ್ದಾರೆ. ಈ ಐವರಲ್ಲಿ ಜರ್ಮನ್‌ಪ್ರೀತ್ ಸಿಂಗ್, ಸಂಜಯ್, ರಾಜ್ ಕುಮಾರ್ ಪಾಲ್, ಅಭಿಷೇಕ್, ಸುಖಜಿತ್ ಸಿಂಗ್ ಸೇರಿದ್ದಾರೆ.

ಭಾರತ ಹಾಕಿ ತಂಡ: ಹರ್ಮನ್‌ಪ್ರೀತ್ ಸಿಂಗ್ (ನಾಯಕ), ಹಾರ್ದಿಕ್ ಸಿಂಗ್ (ಉಪನಾಯಕ), ಪಿಆರ್ ಶ್ರೀಜೇಶ್ (ಗೋಲ್‌ಕೀಪರ್), ಮನ್‌ಪ್ರೀತ್ ಸಿಂಗ್ (ಮಿಡ್‌ಫೀಲ್ಡರ್), ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಸುಮಿತ್ ಮತ್ತು ಸಂಜಯ್, ರಾಜ್ ಕುಮಾರ್ ಪಾಲ್, ಶಂಶೇರ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್, ಅಭಿಷೇಕ್, ಸುಖಜೀತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಮನದೀಪ್ ಸಿಂಗ್ ಮತ್ತು ಗುರ್ಜಂತ್ ಸಿಂಗ್.

Ad
Ad
Nk Channel Final 21 09 2023
Ad