ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಬೆನ್ನಲ್ಲೇ ಭಾರತದ ಡಿ.ಗುಕೇಶ್ ಅವರ ಕಣ್ಣಲ್ಲಿ ಆನಂದಭಾಷ್ಪ ಧಾರೆಯಾಗಿದೆ. ಆ ಮೂಲಕ ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ವಿಶ್ವದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಅಲ್ಲದೆ ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ ಬಳಿಕ ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಭಾರತೀಯ ಆಟಗಾರ ಎನಿಸಿದ್ದಾರೆ.ವಿಶ್ವ ಚಾಂಪಿಯನ್‌ಷಿಪ್ ಗೆಲುವಿನ ಕನಸು ನನಸಾದ ಕ್ಷಣ ಗುಕೇಶ್ ಅವರಿಗೆ ತಮ್ಮ ಭಾವನೆಗಳನ್ನು ತಡೆದುಕೊಳ್ಳಲಿಲ್ಲ. ಅಲ್ಲದೆ ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹರಿದಾಡುತ್ತಿದೆ. 18 ವರ್ಷದ ಗುಕೇಶ್, ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಮಣಿಸಿ, ಚಾಂಪಿಯನ್ ಆದರು. 14ನೇ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ್ದಾರೆ