Bengaluru 22°C
Ad

ಅತಿ ವೇಗದ ದ್ವಿಶತಕ ಸಿಡಿಸಿ 40 ವರ್ಷದ​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈಯಲ್ಲಿ ಸಾಗುತ್ತಿರುವ ಏಕೈಕ ಟೆಸ್ಟ್​ ಪಂದ್ಯದ ಮೊದಲ ದಿನವೇ ಭಾರತ ಮೇಲುಗೈ ಸಾಧಿಸಿದೆ

ಚೆನ್ನೈ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈಯಲ್ಲಿ ಸಾಗುತ್ತಿರುವ ಏಕೈಕ ಟೆಸ್ಟ್​ ಪಂದ್ಯದ ಮೊದಲ ದಿನವೇ ಭಾರತ ಮೇಲುಗೈ ಸಾಧಿಸಿದೆ. . ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ತಮ್ಮ ಆಟದಿಂದ ಎಲ್ಲರ ಗಮನ ಸೆಳೆದಿದ್ದಾರೆ.. ಈ ಪಂದ್ಯದಲ್ಲಿ ಶಫಾಲಿ ಬಿರುಸಿನ ಶತಕ ಬಾರಿಸುವ ಮೂಲಕ 40 ವರ್ಷಗಳ ಹಿಂದಿನ ಟೆಸ್ಟ್​ ದಾಖಲೆಯೊಂದನ್ನು ಮುರಿದಿದ್ದಾರೆ.

Ad
300x250 2

ಮೊದಲ ಬ್ಯಾಟಿಂಗ್‌ ಆಯ್ದುಕೊಂಡ ಭಾರತ ಮೊದಲ ಬ್ಯಾಟಿಂಗ್‌ ಆರಂಭಿಸಿದ ಶಫಾಲಿ ವರ್ಮಾ ಕೇವಲ 113 ಎಸೆತಗಳಲ್ಲಿ ತಮ್ಮ ಶತಕ ಪೂರ್ಣಗೊಳಿಸಿದರು. ಆಟ ಮುಂದುವರೆಸಿದ ಶಫಾಲಿ, ಕೇವಲ 196 ಎಸೆತಗಳಲ್ಲಿ ದ್ವಿಶತಕ ಬಾರಿಸಿದರು. ಇದರೊಂದಿಗೆ ಅವರು ಈ ಸಾಧನೆ ಮಾಡಿದ ವಿಶ್ವದ 10 ನೇ ಮಹಿಳಾ ಕ್ರಿಕೆಟಿಗರು ಮತ್ತು ಭಾರತದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡರು. ಅಂತಿಮವಾಗಿ ಶಫಾಲಿ 197 ಎಸೆತಗಳಲ್ಲಿ 23 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್​ಗಳ ಸಹಿತ 205 ರನ್ ಕಲೆಹಾಕಿ ರನೌಟ್​ಗೆ ಬಲಿಯಾದರು.

Ad
Ad
Nk Channel Final 21 09 2023
Ad