Categories: ಕ್ರೀಡೆ

ಐಪಿಎಲ್ 2024: ನಾಳೆ ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಸಿಎಸ್‌ಕೆ ಮುಖಾಮುಖಿ

ಚೆನ್ನೈ: ನಾಳೆಯಿಂದ ಐಪಿಎಲ್ ಪ್ರಾರಂಭವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಪಡೆದಿರುವ ಐಪಿಎಲ್ ನ ಮೊದಲ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಮುಖಿಯಾಗಲಿದೆ.

ಚೆನ್ನೈ ಸೂಪರ್ ಕಿಂಗ್ ತಂಡ ಐಪಿಎಲ್ ನಲ್ಲಿ ಒಟ್ಟರೆ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 16 ವರ್ಷಗಳಿಂದ ಒಮ್ಮೆಯೂ ಕಪ್ಪು ಗೆಲ್ಲಲು ಸಾಧ್ಯವಾಗಿಲ್ಲ, ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಇತ್ತೀಚಿಗಷ್ಟೇ ಆರ್ಸಿಬಿ ತಂಡ ಚಾಂಪಿಯನ್ ಆಗಿದ್ದು, ಈ ಬಾರಿಯ ಪುರುಷರ ಐಪಿಎಲ್ ನಲ್ಲಿ ಆರ್ಸಿಬಿ ತಂಡ ಮೊದಲ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಾಗಿದೆ.

ಉಭಯ ತಂಡಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇದುವರೆಗೆ 8 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ಬಾರಿ ಭರ್ಜರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 2008 ರಲ್ಲಿ. ಇದಾದ ಬಳಿಕ ಚೆನ್ನೈನಲ್ಲಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲುವಿನ ನಗೆ ಬೀರಿಲ್ಲ.

Ashitha S

Recent Posts

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

12 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

16 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

29 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

32 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

53 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

1 hour ago