Categories: ಕ್ರೀಡೆ

ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಆರ್‌ ಆರ್; ಕೊನೆಯ ಸ್ಥಾನದಲ್ಲಿ ಯಾರು ?

ಮುಂಬೈ: ಐಪಿಎಲ್ 2024ರ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ರಾಜಸ್ಥಾನ್ ರಾಯಲ್ಸ್ ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +0.698.

8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್​ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಸನ್​ರೈಸರ್ಸ್ ಹೈದರಾಬಾದ್ ತಂಡವು 8 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.577.

ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್​ಎಸ್​ಜಿ ಒಟ್ಟು 10 ಅಂಕಗಳೊಂದಿಗೆ +0.148 ನೆಟ್​ ರನ್​ ರೇಟ್ ಹೊಂದಿದೆ.

8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್​ಕೆ ತಂಡದ ಪ್ರಸ್ತುತ ನೆಟ್ ರನ್​ ರೇಟ್ +0.415.

9 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.386 ನೆಟ್​ ರನ್​ ರೇಟ್​ನೊಂದಿಗೆ 8 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

9 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.974.

ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ -0.187.

ಎಂಟು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್​ ರನ್ ರೇಟ್ -0.227.

ಆರ್​ಸಿಬಿ ತಂಡವು ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 4 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.721.

 

 

Ashitha S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

7 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

7 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

9 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

9 hours ago