Categories: ಕ್ರೀಡೆ

ಅಗ್ರಸ್ಥಾನಕ್ಕೇರಿದ ಕೆಕೆಆರ್: ಆರ್‌ಸಿಬಿ ಸ್ಥಾನ ಎಷ್ಟರಲ್ಲಿದೆ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರ 16 ಪಂದ್ಯಗಳು ಮುಗಿದಿವೆ. ಈ ಹದಿನಾರು ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.

ಈ ಬಾರಿಯ ಐಪಿಎಲ್​ನ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +2.518 ನೆಟ್​ ರನ್ ಹೊಂದುವ ಮೂಲಕ ಆರ್​ಆರ್​ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ ಮೂರು ಪಂದ್ಯಗಳನ್ನಾಡಿದ್ದು, ಮೂರು ಮ್ಯಾಚ್​ನಲ್ಲೂ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

ಇನ್ನು ಆಡಿರುವ ನಾಲ್ಕು ಮ್ಯಾಚ್​ಗಳಲ್ಲಿ 3 ರಲ್ಲಿ ಸೋತಿರುವ ಆರ್​ಸಿಬಿ ಈ ಬಾರಿ 8ನೇ ಸ್ಥಾನಕ್ಕೇರಿದೆ. ಕೆಕೆಆರ್ ವಿರುದ್ಧ ಹೀನಾಯವಾಗಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಸ್ಥಾನ ಕುಸಿತ ಕಂಡಿದ್ದು, ಇದರಿಂದ ಆರ್​ಸಿಬಿ ಒಂದು ಸ್ಥಾನ ಮೇಲೇರಿದೆ. ಈ ಮೂಲಕ ಆರ್​ಸಿಬಿ 2 ಅಂಕ ಮತ್ತು -0.876 ನೆಟ್​ ರನ್ ರೇಟ್​ನೊಂದಿಗೆ 8ನೇ ಸ್ಥಾನದಲ್ಲಿದೆ.

 

Ashitha S

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

4 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

19 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

31 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago