Bengaluru 28°C
Ad

ಇಂದು ಆರ್​​​ಸಿಬಿ ಮತ್ತು ರಾಜಸ್ಥಾನ ನಡುವೆ ಜಿದ್ದಾಜಿದ್ದಿ; ಮಳೆ ಬಂದರೆ ಯಾರಿಗೆ ಲಾಭ ?

Rr Vs Rcb

ಅಹಮದಾಬಾದ್: ಇಂದು ಆರ್​​​ಸಿಬಿ ಮತ್ತು ರಾಜಸ್ಥಾನ ನಡುವೆ ಜಿದ್ದಾಜಿದ್ದಿ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಜಿದ್ದಾಜಿದ್ದಿ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.

ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಅದರಂತೆ 2 ತಂಡಗಳು 20 ಓವರ್​ಗಳನ್ನು ಆಡಲಿದೆ.

ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ 8 ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ. ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ಕೂಡ ನಡೆಯದಿದ್ದರೆ, ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬಂದು ಮ್ಯಾಚ್ ಕ್ಯಾನ್ಸಲ್ ಆದರೆ ಅದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವರದಾನವಾಗಲಿದೆ.

ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಏಕೆಂದರೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್:
ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (C & WK), ರಿಯಾನ್ ಪರಾಗ್, ಧ್ರುವ್ ಜುರೆಲ್, ಶುಭಂ ದುಬೆ, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು:
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ಡಬ್ಲ್ಯುಕೆ), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಯಶ್ ದಯಾಳ್, ಮೊಹಮ್ಮದ್ ಸಿರಾಜ್, ಸ್ವಪ್ನಿಲ್ ಸಿಂಗ್

Ad
Ad
Nk Channel Final 21 09 2023
Ad