ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ರವೀಂದ್ರ ಜಡೇಜಾ

ಹೈದರಾಬಾದ್:‌ ಇಲ್ಲಿನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ ಸ್ಪಿನ್ನರ್​ಗಳು ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕಿದ್ದಾರೆ.

ಪ್ರಸ್ತುತ ಟೀ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 215 ರನ್ ಕಲೆಹಾಕಿದೆ. ಆಂಗ್ಲ ಬ್ಯಾಟರ್​ಗಳಿಗೆ ದುಸ್ವಪ್ನವಾಗಿ ಕಾಡಿದ ಸ್ಪಿನ್ ತ್ರಿವಳಿಗಳಾದ ರವೀಂದ್ರ ಜಡೇಜಾ, ಆರ್​ ಅಶ್ವಿನ್, ಅಕ್ಷರ್ ಪಟೇಲ್ ಕ್ರಮವಾಗಿ 3, 2, 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ದಿನದಾಟದ ಆರಂಭದಲ್ಲೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಆರಂಭಿಕ ಆಘಾತ ನೀಡಿದ ಜಡೇಜಾ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜಾವಗಲ್ ಶ್ರೀನಾಥ್ ಈ ಸಾಧನೆ ಮಾಡಿದ ಭಾರತೀಯ ಬೌಲರ್​ಗಳಾಗಿದ್ದಾರೆ.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

4 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

5 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

6 hours ago