News Karnataka Kannada
Friday, May 03 2024
ಕ್ರೀಡೆ

ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Javelin star Neeraj Chopra pulls out of Commonwealth Games
Photo Credit : Twitter

ನವದೆಹಲಿ: ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯದ ವೇಳೆ ನೀರಜ್ ಗಾಯಗೊಂಡಿದ್ದು,  ಮುಂಬರುವ ಕಾಮನ್ವೆಲ್ತ್ ಕೂಟದಿಂದ ಹಿಂದೆ ಸರಿದಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಮಂಗಳವಾರ ತಿಳಿಸಿದೆ.

ಒರೆಗಾನ್‌ನಲ್ಲಿ ಭಾನುವಾರ ನಡೆದ ಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ನಲ್ಲಿ 88.13 ಮೀಟರ್‌ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದ ನೀರಜ್, ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ತಮ್ಮ ಪ್ರದರ್ಶನದ ವೇಳೆ ಗಾಯಗೊಂಡಿದ್ದರಿಂದ ಕಾಮನ್‌ವೆಲ್ತ್ ಗೇಮ್ಸ್ ಗೆ ಲಭ್ಯವಾಗುತ್ತಿಲ್ಲ.

ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಫಿಟ್ನೆಸ್ ಕಾಳಜಿಯಿಂದಾಗಿ ಬರ್ಮಿಂಗ್ ಹ್ಯಾಮ್ 2022 ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲು ಯುಎಸ್ ನಿಂದ ನನಗೆ ಕರೆ ಬಂದಿತ್ತು. 2022 ರ ಯುಜೀನ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ ನಂತರ, ಚೋಪ್ರಾ ಅವರು ಸೋಮವಾರ ಎಂಆರ್ ಐ ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ ಮತ್ತು ಅದರ ಆಧಾರದ ಮೇಲೆ ಅವರ ವೈದ್ಯಕೀಯ ತಂಡವು ಅವರಿಗೆ ಒಂದು ತಿಂಗಳ ವಿಶ್ರಾಂತಿಗೆ ಸಲಹೆ ನೀಡಿದೆ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು