ದುಬೈ : ಅತ್ಯಂತ ಕಿರಿಯ ವಯಸ್ಸಿಗೆ ಅತ್ಯುನ್ನತ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಹೆಗ್ಗಳಿಕೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಚೇರ್ಮೆನ್ ಆಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರೆಗ್ ಬಾರ್ಕ್ಲೇ ಎರಡನೇ ಅವಧಿ ಶೀಘ್ರದಲ್ಲೇ ಮುಕ್ತಾಯಗೊಳ್ಳುತ್ತಿದೆ. ಮೂರನೇ ಅವಧಿಗೆ ಮುಂದುವರಿಯಲು ಗ್ರೆಗ್ ನಿರಾಕರಿಸಿದ್ದರು. ಚುನಾವಣೆ ಮೂಲಕ ಮುಂದಿನ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆ ವೇಳೆ ಜಯ್ ಶಾ ಪ್ರತಿಸ್ಪರ್ಧಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಜಯ್ ಶಾ ಅವಿರೋಧವಾಗಿ ಐಸಿಸಿ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಜಯ್ ಶಾ ವಿಶ್ವ ಕ್ರಿಕೆಟ್ ಮಂಡಳಿಯ ಗದ್ದುಗೆ ಏರಲಿದ್ದಾರೆ. ಅದರಂತೆ ಡಿಸೆಂಬರ್ 1 ರಿಂದ ಜಯ್ ಶಾ ಕಾರ್ಯಾರಂಭ ಮಾಡಲಿದ್ದಾರೆ.