ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಮಾಜಿ ವೇಗಿ ಜೂಲನ್ ಗೋಸ್ವಾಮಿಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ಮಹಿಳಾ ತಂಡದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವನ್ನು ಹೊಂದಿದ್ದು, ಇದೀಗ ಟಿಕೆಆರ್ ಮಹಿಳಾ ತಂಡದ ಮಾರ್ಗದರ್ಶಕವಾಗಿ ಜೂಲನ್ ಅವರನ್ನು ನೇಮಿಸಲಾಗಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ (WPL) ನಲ್ಲಿ ಜೂಲನ್ ಗೋಸ್ವಾಮಿ ಮುಂಬೈ ಇಂಡಿಯನ್ಸ್ (MI) ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಇದೇ ಮೊದಲ ಬಾರಿಗೆ ವಿದೇಶಿ ಲೀಗ್ನಲ್ಲಿ ಕಾರ್ಯ ನಿರ್ವಹಿಸಲು ಭಾರತದ ಮಾಜಿ ವೇಗಿ ತಯಾರಾಗಿದ್ದಾರೆ.

