ಪ್ಯಾರಿಸ್: ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಅವರ ತೂಕ ಹೆಚ್ಚಳದ ಕಾರಣದಿಂದ 50 ಕೆ.ಜಿ ವಿಭಾಗದ ಪ್ರಿಸ್ಟೈಲ್ ಫೈನಲ್ ಪಂದ್ಯದಿಂದ ಅವರನ್ನು ಅನರ್ಹಗೊಳಿಸಿದೆ. ಇದನ್ನು ಪ್ರಶ್ನಿಸಿ ವಿನೇಶ್ ಫೋಗಟ್, ಕ್ರೀಡಾ ನ್ಯಾಯ ಮಂಡಳಿ ಮೆಟ್ಟಿಲೇರಿದ್ದರು. ಇದೀಗ ವಿನೇಶ್ ಅವರ ಅರ್ಜಿಯನ್ನು ಕ್ರೀಡಾ ನ್ಯಾಯ ಮಂಡಳಿ ಪುರುಸ್ಕರಿಸಿದ್ದು, ವಿಚಾರಣೆ ಕೈಗೆತ್ತಿಕೊಂಡಿದೆ.
ವಾಸ್ತವವಾಗಿ ಒಲಿಂಪಿಕ್ಸ್ ಸ್ಪರ್ಧೆಯಿಂದ ಅನರ್ಹಗೊಂಡ ಬಳಿಕ ವಿನೇಶ್ ಫೋಗಟ್ ಅವರು ತನಗೆ ಕನಿಷ್ಠ ಬೆಳ್ಳಿ ಪದಕವನ್ನಾದರೂ ನೀಡಬೇಕು ಎಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದೀಗ CSA ವಿನೇಶ್ ಅವರ ಮನವಿಯನ್ನು ಸ್ವೀಕರಿಸಿದ್ದು ವಿಚಾರಣೆ ನಡೆಸಲು ಮುಂದಾಗಿದೆ. ಈ ಪ್ರಕರಣದ ಕುರಿತು ಅಂತಿಮ ನಿರ್ಧಾರ ಇನ್ನಷ್ಟೇ ಬರಬೇಕಿದೆ. ಹೀಗಾಗಿ ವಿನೇಶ್ ತಮ್ಮ ಚೊಚ್ಚಲ ಒಲಿಂಪಿಕ್ ಪದಕ ಪಡೆಯುವ ಭರವಸೆಗೆ ಮತ್ತೊಮ್ಮೆ ಜೀವ ಬಂದಿದೆ.
Ad