Ad

ನ್ಯೂಝಿಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಕೇನ್ ವಿಲಿಯಮ್ಸನ್

Kane Williamson

ನ್ಯೂಝಿಲೆಂಡ್ ತಂಡದ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಟಿ20 ವಿಶ್ವಕಪ್​ನಲ್ಲಿನ ನ್ಯೂಝಿಲೆಂಡ್ ತಂಡದ ಹೀನಾಯ ಪ್ರದರ್ಶನದ ಹಿನ್ನಲೆ, ವಿಲಿಯಮ್ಸನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Ad
300x250 2

ಅದರಂತೆ ಏಕದಿನ ಮತ್ತು ಟಿ20 ತಂಡಗಳ ನಾಯಕತ್ವದಿಂದ ಕೆಳಗಿಳಿಯಲು ವಿಲಿಯಮ್ಸನ್ ನಿರ್ಧರಿಸಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಸೋತಿದ್ದ ಕಿವೀಸ್ ಪಡೆ, ಆ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಸೋಲನುಭವಿಸಿತ್ತು. ಈ ಎರಡು ಸೋಲುಗಳೊಂದಿಗೆ ನ್ಯೂಝಿಲೆಂಡ್ ತಂಡ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲೇ ಹೊರಬಿದ್ದಿದೆ.

ಈ ಹೀನಾಯ ಪ್ರದರ್ಶನದ ಬೆನ್ನಲ್ಲೇ ಕೇನ್ ವಿಲಿಯಮ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೆ 2024-25 ಋತುವಿಗಾಗಿ ಮಂಡಳಿಯಿಂದ ಕೇಂದ್ರೀಯ ಒಪ್ಪಂದವನ್ನು ಸಹ ನಿರಾಕರಿಸಿದ್ದಾರೆ. ಅಲ್ಲದೆ ನ್ಯೂಝಿಲೆಂಡ್ ಕ್ರಿಕೆಟ್ ಮಂಡಳಿಯು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇನ್ ವಿಲಿಯಮ್ಸನ್ ತೆಗೆದುಕೊಂಡ ನಿರ್ಧಾರವನ್ನು ಪ್ರಕಟಿಸಿದ್ದು, ಸ್ಟಾರ್ ಬ್ಯಾಟರ್ ತನ್ನ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ವಿಸ್ತರಿಸಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ನ್ಯೂಝಿಲೆಂಡ್ ತಂಡಕ್ಕೆ ಬದಲಿ ಕ್ಯಾಪ್ಟನ್​ನನ್ನು ಆಯ್ಕೆ ಮಾಡುವಂತೆ ವಿಲಿಯಮ್ಸನ್ ಮಂಡಳಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

 

Ad
Ad
Nk Channel Final 21 09 2023
Ad