News Karnataka Kannada
Monday, April 29 2024
ಮನರಂಜನೆ

ಖೇಲೋ ಇಂಡಿಯಾ ಯೂತ್ ಗೇಮ್ಸ್‌: ಚಿನ್ನದ ಪದಕ ಗೆದ್ದ ನಟ ಆರ್ ಮಾಧವನ್ ಪುತ್ರ

Khelo India Youth Games: R Madhavan's son wins gold medal
Photo Credit : Twitter

ಮಧ್ಯಪ್ರದೇಶ: ಭೋಪಾಲ್ ನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ ನಟ ಆರ್ ಮಾಧವನ್ ಅವರ ಪುತ್ರ ವೇದಾಂತ್ ಮಾಧವನ್ ಚಿನ್ನದ ಪದಕ ಗೆದ್ದಿದ್ದಾರೆ.

200 ಮೀಟರ್​ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ವೇದಾಂತ್ ಮಾಧವನ್, ‘ಖೇಲೋ ಇಂಡಿಯಾ ನನ್ನ ಮೆಚ್ಚಿನ ಸ್ಪರ್ಧೆಗಳಲ್ಲಿ ಒಂದಾಗಿದೆ. ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಡಬೇಕು ಎಂಬುದು ನನ್ನ ಕನಸು. ಇದಕ್ಕಾಗಿ ಶ್ರಮಿಸುತ್ತಿದ್ದೇನೆ’ ಎಂದರು.

2022ರಲ್ಲಿ ಡೆನ್ಮಾರ್ಕ್‌ನ ಕೋಪನ್‌ ಹೇಗನ್‌ನಲ್ಲಿ ನಡೆದ ಡ್ಯಾನಿಶ್‌ ಓಪನ್ ಈಜುಕೂಟದಲ್ಲಿ 800 ಮೀಟರ್ಸ್‌ ಹಾಗೂ 1500 ಮೀಟರ್ಸ್ ಫ್ರೀಸ್ಟೈಲ್ ವಿಭಾಗದಲ್ಲಿ ಸ್ಪರ್ಧಿಸಿದ್ದ ವೇದಾಂತ್‌ ಮಾಧವನ್ ವೈಯಕ್ತಿಕ ಶ್ರೇಷ್ಠ ಸಾಧನೆಯೊಂದಿಗೆ ಚಿನ್ನ ಮತ್ತು ಬೆಳ್ಳಿ ಪದಕ ಜಯಿಸಿದ್ದರು. 800 ಮೀಟರ್ಸ್ ಗುರಿಯನ್ನು 8 ನಿಮಿಷ 17.28 ಸೆಕೆಂಡ್‌ಗಳಲ್ಲಿ ತಲುಪಿ ವಿಶೇಷ ದಾಖಲೆ ಬರೆದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು