ಮುಂಬೈ: ವಿರಾಟ್ ಕೊಹ್ಲಿ ಆಡುವ ಪ್ರತಿ ಪಂದ್ಯದಲ್ಲೂ ಹೊಸ ಇತಿಹಾಸ ಸೃಷ್ಟಿಸುತ್ತಿದ್ದಾರೆ. ವಿಶ್ವಕಪ್-2023 ಟೂರ್ನಿಯಲ್ಲಿ ಬೊಂಬಾಟ್ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಇದೀಗ ಮತ್ತೊಂದು ಹೊಸ ದಾಖಲೆ ನಿರ್ಮಿಸಿದ್ದಾರೆ. ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ.
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಏಕದಿನ ಕ್ರಿಕೆಟ್ ಮಾದರಿಯಲ್ಲಿ ಏಷ್ಯಾದಲ್ಲೇ 8,000 ರನ್ ವೇಗವಾಗಿ ಪೂರ್ಣಗೊಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿ ಕೇವಲ 50 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 50 ರನ್ ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ.
ಏಕದಿನ ಕ್ರಿಕೆಟ್ ಅತಿ ಹೆಚ್ಚು ಸಲ 1,000+ ರನ್ ಗಳಿಸಿದ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿ ಒಟ್ಟು 8 ಬಾರಿ (2011-14, 2017-19, 2023*) ಹಾಗೂ ಸಚಿನ್ ತೆಂಡೂಲ್ಕರ್ 7 ಬಾರಿ (1994, 1996-98, 2000, 2003, 2007) ಈ ಸಾಧನೆ ಮಾಡಿದ್ದಾರೆ.