News Karnataka Kannada
Friday, May 03 2024
ಕ್ರೀಡೆ

ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ: ಪಾಕ್​​ ವಿರುದ್ಧ ಸಿಡಿಲಬ್ಬರದ ಶತಕ

Sports
Photo Credit : IANS

ಕೊಲಂಬೋ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಪಾಕ್​​ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್​ ಬ್ಯಾಟ್ಸ್​​ಮನ್​​ ಕೊಹ್ಲಿ ಮಿಂಚಿನ ಬ್ಯಾಟಿಂಗ್​ ಮಾಡಿದ್ದಾರೆ ಬಹುನಿರೀಕ್ಷಿತ ಏಷ್ಯಾಕಪ್​​ ಟೂರ್ನಿಯಲ್ಲಿ ಪಾಕ್​​ ವಿರುದ್ಧದ ಮಹತ್ವದ ಪಂದ್ಯದಲ್ಲಿ ಕಿಂಗ್​ ಕೊಹ್ಲಿ ಶತಕ ಸಿಡಿಸಿದ್ದಾರೆ.

ಇನ್ನಿಂಗ್ಸ್​ ಉದ್ಧಕ್ಕೂ ತಾಳ್ಮೆಯಿಂದ ಬ್ಯಾಟ್​ ಬೀಸಿದ ಕೊಹ್ಲಿ ಕೊನೆಗೂ ಮತ್ತೊಂದು ಶತಕ ಸಿಡಿಸಿದರು. ಪಾಕ್​​ ಬೌಲರ್​ಗಳ ಬೆಂಡೆತ್ತಿದ ರನ್​ ಮಿಷನ್​​, ಬರೋಬ್ಬರಿ 2 ಸಿಕ್ಸರ್​​, 6 ಫೋರ್​ ಸಿಡಿಸುವ ಮೂಲಕ ಸೆಂಚೂರಿ ಬಾರಿಸಿದ್ದಾರೆ. ಬ್ಯಾಟಿಂಗ್​ ವೇಳೆ ಕೊಹ್ಲಿ ಸ್ಟ್ರೈಕ್​ ರೇಟ್​ 110ಕ್ಕೂ ಹೆಚ್ಚು ಇತ್ತು. ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 84 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ವಿರಾಟ್ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಬಾರಿಸಿದರು.

ಈ 122 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 13 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ನಲ್ಲಿ 13 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿಯ ಪಾಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು