ಚೆನ್ನೈ: 2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ ಕೆಕೆಆರ್ ನಾಯಕನಿಗೆ ಮತ್ತೊಂದು ಶಾಕ್ ಎದುರಾಗಿದೆ. ಚೆನ್ನೈ ವಿರುದ್ಧದ ಸೋಲಿನ ಬಳಿಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.
ಕೆಕೆಆರ್ ತಂಡ ಮಂಗಳವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ನಾಯಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಆಟಗಾರ ರುತುರಾಜ್ ಗಾಯಕ್‌ವಾಡ್ ವಿರುದ್ಧ ಅಗತ್ಯವಾದ ಓವರ್-ರೇಟ್ ಕಾಯ್ದುಕೊಳ್ಳಲು ವಿಫಲವಾಗಿದೆ.
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್‌ಗೆ ಸಂಬಂಧಿಸಿದ್ದು, ಮೊದಲ ಬಾರಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ (BCCI) ತಿಳಿಸಿದೆ. ಈ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೂ 5 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿಯೂ ಗೆಲುವು ಸಾಧಿಸಿಲ್ಲ. ಶುಕ್ರವಾರ (ಏ.17) ಗುಜರಾತ್ ಜೊತೆ ಕೆಕೆಆರ್ ತನ್ನ 6ನೇ ಪಂದ್ಯವನ್ನು ಆಡಲಿದೆ. ನಿನ್ನೆಯ ಪಂದ್ಯದಲ್ಲಿ ಕೆಕೆಆರ್ ತಂಡ ಆರಂಭದಲ್ಲೇ ಹಿನ್ನಡೆ ಅನುಭವಿಸಿತು.

