ಇಂಡಿಯನ್ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 17 ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದಾರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.
ವಿಶೇಷ ಎಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈವರೆಗೆ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಮೂರನೇ ಸಲ ಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅತ್ತ ಹೈದರಾಬಾದ್ ಫ್ರಾಂಚೈಸಿ ಕೂಡ ಈಗಾಗಲೇ 2 ಸಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಮೂರನೇ ಬಾರಿ ಟ್ರೋಫಿ ಗೆಲ್ಲುವ ಬರವಸೆಯಲ್ಲಿದೆ.
ಇನ್ನು ಉಭಯ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್ಆರ್ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿದೆ. ಅಂದರೆ ಎಸ್ಆರ್ಹೆಚ್ ವಿರುದ್ಧ ಕೆಕೆಆರ್ ಮೇಲುಗೈ ಹೊಂದಿರುವುದು ಸ್ಪಷ್ಟ. ಆದರೆ ಈ ಬಾರಿ ಹೊಸ ಭರವಸೆಯಲ್ಲಿದೆ.
ಬರಾಬರಿಯಾಗಿರುವ ಉಭಯ ತಂಡಗಳಲ್ಲಿ ಯಾರಿಗೆ ಕ್ಪಪ ಒಲಿಯುವುದು ಇಂದು ಕಾದುನೋಡಬೇಕಿದೆ.
ಮುಖಾಮುಖಿ: ಕೆಕೆಆರ್ vs ಎಸ್ಆರ್ಹೆಚ್
ನಾಯಕರುಗಳು: ಶ್ರೇಯಸ್ ಅಯ್ಯರ್ (ಕೆಕೆಆರ್), ಪ್ಯಾಟ್ ಕಮಿನ್ಸ್ (ಎಸ್ಆರ್ಹೆಚ್)
ಪಂದ್ಯ ನಡೆಯುವ ಸ್ಥಳ: ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
ಟಾಸ್ ಪ್ರಕ್ರಿಯೆ: ರಾತ್ರಿ 7 ಗಂಟೆಗೆ
ಪಂದ್ಯ ಶುರು: ರಾತ್ರಿ 7.30 ರಿಂದ