Categories: ಕ್ರೀಡೆ

ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ: ವಿಡಿಯೋ ವೈರಲ್‌

ಬೆಂಗಳೂರು: ಸೋಮವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಅಭಿಮಾನಿಯೋರ್ವ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದ ಪ್ರಸಂಗ ಜರುಗಿತ್ತು.

ಆತನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಇದೀಗ ಆತನಿಗೆ ಸ್ಟೇಡಿಯಂ ಸಿಬ್ಬಂದಿ ಅಮಾನುಷವಾಗಿ ಥಳಿಸಿದ ಘಟನೆ ನಡೆದಿದ್ದು, ತಡವಾಗಿ ಇದು ಬೆಳಕಿಗೆ ಬಂದಿದೆ. ಇದರ ವಿಡಿಯೊ ಈಗ ಎಲ್ಲಡೆ ವೈರಲ್​ ಆಗಿದ್ದು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ವಿರಾಟ್​ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ರಾಯಚೂರು ಮೂಲದ ಕುರುಮಪ್ಪ‌ ಎನ್ನುವ ಅಭಿಮಾನಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಪಿಚ್‌ ಕಡೆ ಬಂದು ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಹಾಕಿದ್ದರು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು.

ಆದರೆ ಆ ಬಳಿಕ ಏನು ನಡೆದಿದೆ ಎನ್ನುವ ಘಟನೆ ಈಗ ಬೆಳಕಿಗೆ ಬಂದಿದೆ. ಸೆಲ್ಲಾರ್​ಗೆ ಕರೆತಂದ ಭದ್ರತಾ ಸಿಬ್ಬಂದಿ ಆತನಿಗೆ ಸರಿಯಾಗಿ ಥಳಿಸಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಏಟು ತಿಂದ ಆತನಿಗೆ ಸರಿಯಾಗಿ ಎದ್ದು ನಿಲ್ಲಲು ಕೂಡ ಆಗುತ್ತಿರಲಿಲ್ಲ. ಇದೆಲ್ಲ ವಿಡಿಯೊದಲ್ಲಿ ಸೆರೆಯಾಗಿದೆ.

https://www.instagram.com/reel/C49075LMSGC/?utm_source=ig_embed&ig_rid=71c343e5-2bf3-4aba-95e5-9bc83716f345

 

Ashitha S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

38 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

1 hour ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago