News Karnataka Kannada
Sunday, April 28 2024
ಕ್ರೀಡೆ

ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಅತಿ ರನ್ ಕಲೆಹಾಕಿ ಭರ್ಜರಿ ಪ್ರದರ್ಶನ ತೋರಿದ್ದ ಕೊಹ್ಲಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ 2024ರಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ.
Photo Credit : Twitter

ಮುಂಬೈ: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಅತಿ ರನ್ ಕಲೆಹಾಕಿ ಭರ್ಜರಿ ಪ್ರದರ್ಶನ ತೋರಿದ್ದ ಕೊಹ್ಲಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ 2024ರಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ.

ನವೆಂಬರ್ 30 ರಂದು ನಡೆದ ಬಿಸಿಸಿಐ ಆಯ್ಕೆಗಾರರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಈ ಮೀಟಿಂಗ್​ನಲ್ಲಿ ಕೋಚ್ ರಾಹುಲ್ ದ್ರಾವಿಡ್ ಕೂಡ ಇದ್ದರು. ಇಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಟಿ20 ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆಯಂತೆ.

2023 ರ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವೈಟ್ ಬಾಲ್ ಸರಣಿಯಿಂದ ವಿರಾಮ ತೆಗೆದುಕೊಂಡಿದ್ದಾರೆ. ಆಫ್ರಿಕಾದಲ್ಲಿ ನಡೆಯಲಿರುವ ಟಿ20 ಹಾಗೂ ಏಕದಿನ ಸರಣಿ ಎರಡರಲ್ಲೂ ಕೊಹ್ಲಿ ಆಡುತ್ತಿಲ್ಲ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2024 ರ ಟಿ 20 ವಿಶ್ವಕಪ್‌ಗೆ ಯುವ ಟೀಮ್ ಇಂಡಿಯಾವನ್ನು ಕಟ್ಟುತ್ತಿದೆ. ಹೀಗಾಗಿ ಹಿರಿಯ ಆಟಗಾರರನ್ನೆಲ್ಲ ಕೈಬಿಡಲು ನಿರ್ಧರಿಸಿದೆ ಎಂದು ಕೆಲ ಸ್ಟೋಟ್ಸ್‌ ಮೂಲಗಳು ವರದಿ ಮಾಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು