Categories: ಕ್ರೀಡೆ

ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ

ಮುಂಬೈ: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಅತಿ ರನ್ ಕಲೆಹಾಕಿ ಭರ್ಜರಿ ಪ್ರದರ್ಶನ ತೋರಿದ್ದ ಕೊಹ್ಲಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ 2024ರಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ.

ನವೆಂಬರ್ 30 ರಂದು ನಡೆದ ಬಿಸಿಸಿಐ ಆಯ್ಕೆಗಾರರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಈ ಮೀಟಿಂಗ್​ನಲ್ಲಿ ಕೋಚ್ ರಾಹುಲ್ ದ್ರಾವಿಡ್ ಕೂಡ ಇದ್ದರು. ಇಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಟಿ20 ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆಯಂತೆ.

2023 ರ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವೈಟ್ ಬಾಲ್ ಸರಣಿಯಿಂದ ವಿರಾಮ ತೆಗೆದುಕೊಂಡಿದ್ದಾರೆ. ಆಫ್ರಿಕಾದಲ್ಲಿ ನಡೆಯಲಿರುವ ಟಿ20 ಹಾಗೂ ಏಕದಿನ ಸರಣಿ ಎರಡರಲ್ಲೂ ಕೊಹ್ಲಿ ಆಡುತ್ತಿಲ್ಲ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2024 ರ ಟಿ 20 ವಿಶ್ವಕಪ್‌ಗೆ ಯುವ ಟೀಮ್ ಇಂಡಿಯಾವನ್ನು ಕಟ್ಟುತ್ತಿದೆ. ಹೀಗಾಗಿ ಹಿರಿಯ ಆಟಗಾರರನ್ನೆಲ್ಲ ಕೈಬಿಡಲು ನಿರ್ಧರಿಸಿದೆ ಎಂದು ಕೆಲ ಸ್ಟೋಟ್ಸ್‌ ಮೂಲಗಳು ವರದಿ ಮಾಡಿವೆ.

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago