News Karnataka Kannada
Sunday, April 14 2024
Cricket
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಲಹಿರು ತಿರಿಮನ್ನೆ

Lahiru Thirimanne announces retirement from international cricket
Photo Credit : News Kannada

ಶ್ರೀಲಂಕಾ: ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು.

ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.

2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು.

2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು