ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಯುವ ಷಟ್ಲರ್ ಲಕ್ಷ್ಯ ಸೇನ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಭಾರತಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.
ಲಕ್ಷ್ಯ ಸೇನ್, ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ನ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇದರೊಂದಿಗೆ ಒಲಿಂಪಿಕ್ ಇತಿಹಾಸದಲ್ಲಿ ಸೆಮಿಫೈನಲ್ ತಲುಪಿದ ಭಾರತದ ಮೊದಲ ಪುರುಷ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.
ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆಯ ಚೌ ತಿಯೆನ್ ಚೆನ್ ಅವರನ್ನು 19-21, 21-15, 21-12 ರಿಂದ ಸೋಲಿಸಿ ಸೆಮಿ-ಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ.
Ad