Bengaluru 28°C

ಆಗಸ್ಟ್​ 22ಕ್ಕೆ ಲಾಸಾನ್ನೆ ಡೈಮಂಡ್‌ ಲೀಗ್‌: ನೀರಜ್‌ ಚೋಪ್ರಾ ಸ್ಪರ್ಧೆ

ಇದೇ ತಿಂಗಳು 22ರಿಂದ ಆರಂಭಗೊಳ್ಳಲಿರುವ ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ಭಾರತದ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ ಪಾಲ್ಗೊಳ್ಳಲಿದ್ದಾರೆ. ಈ ವಿಚಾರವನ್ನು ಸ್ವತಃ ನೀರಜ್‌ ಖಚಿತಪಡಿಸಿದ್ದಾರೆ.

ನವದೆಹಲಿ: ಇದೇ ತಿಂಗಳು 22ರಿಂದ ಆರಂಭಗೊಳ್ಳಲಿರುವ ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ಭಾರತದ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ ಪಾಲ್ಗೊಳ್ಳಲಿದ್ದಾರೆ. ಈ ವಿಚಾರವನ್ನು ಸ್ವತಃ ನೀರಜ್‌ ಖಚಿತಪಡಿಸಿದ್ದಾರೆ.


ಪ್ಯಾರಿಸ್‌ ಒಲಿಂಪಿಕ್ಸ್‌ ಬಳಿಕ ನೀರಜ್​ ಅವರು ಜರ್ಮನಿಯಲ್ಲಿ ತೊಡೆಸಂಧು ನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರಿಗೆ ವೈದ್ಯರು ಸದ್ಯಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನೀರಜ್​ ಡೈಮಂಡ್‌ ಲೀಗ್‌ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ.


ಮುಂದಿನ ತಿಂಗಳು ಸೆಪ್ಟೆಂಬರ್ 13 ಮತ್ತು 14ರಂದು ಬ್ರಸೆಲ್ಸ್‌ನಲ್ಲಿ ಕೊನೆಯ ಡೈಮಂಡ್‌ ಲೀಗ್‌ ನಡೆಯಲಿದೆ. ಇದಾದ ಮೇಲೆ ನೀರಜ್​ ಮತ್ತೆ ವೈದ್ಯರನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.


ಹಲವು ವರ್ಷಗಳಿಂದ 90 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆಯುವುದಕ್ಕೆ ಸತತ ಪ್ರಯತ್ನ ನಡೆಸುತ್ತಿರುವ ನೀರಜ್​ ಇನ್ನು ಮುಂದೆ 90 ಮೀ. ಗುರಿಯನ್ನು ದೇವರಿಗೆ ಬಿಡುತ್ತೇನೆ ಎಂದು ಹೇಳಿದ್ದಾರೆ. ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು.


 

Nk Channel Final 21 09 2023