ಬೆಂಗಳೂರು: ಮೈಸೂರು ವಾರಿಯರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ನಡೆದ ಮಹಾರಾಜ ಟ್ರೋಫಿ 2024 ಫೈನಲ್ ಪಂದ್ಯದಲ್ಲಿ ಮೈಸೂರು ತಂಡ ಜಯಭೇರಿ ಭಾರಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ. ಮೊದಲು ಬ್ಯಾಟ್ ಮಾಡಿದ ಮೈಸೂರು ತಂಡ ಎಸ್.ಯು.ಕಾರ್ತಿಕ್, ಕರುಣ್ ನಾಯರ್ ಹಾಗೂ ಮನೋಜ್ ಭಾಂಡಗೆ ಸ್ಫೋಟಕ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 207 ರನ್ ಕಲೆಹಾಕಿತು. ದೊಡ್ಡ ಗುರಿ ನೋಡಿಗೆ ಕಂಗಾಲಾದ ಬೆಂಗಳೂರು 8 ವಿಕೆಟ್‌ಗೆ 162 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಬೆಂಗಳೂರು ತಂಡ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ 2ನೇ ಬಾರಿ ಫೈನಲ್‌ನಲ್ಲಿ ಸೋತು ಪ್ರಶಸ್ತಿ ತಪ್ಪಿಸಿಕೊಂಡಿತು. 2022ರ ಚೊಚ್ಚಲ ಆವೃತ್ತಿಯಲ್ಲಿ ಫೈನಲ್‌ಗೇರಿದ್ದ ತಂಡ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ ಸೋತು ರನ್ನರ್-ಅಪ್ ಆಗಿತ್ತು.

