Categories: ಕ್ರೀಡೆ

ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2022 – 2023ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ

ಮಂಗಳೂರು : ಮಾರ್ಚ್ 28, 2023ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ 2022 – 2023ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀಯುತ ಮೆಲ್ವಿನ್ ವಾಸ್ ಇವರು ಆಗಮಿಸಿ ತಮ್ಮ ಭಾಷಣದಲ್ಲಿ  ಪ್ರತಿಯೊಂದು ಕಾರ್ಯದಲ್ಲಿಯೂ ಕೂಡಾ ಯಶಸ್ಸದೊರೆಯಲು ಪ್ರಯತ್ನ ಮುಖ್ಯವಾಗಿದೆ. ಕ್ರೀಡಾ ಸಾಧನೆಯಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬಹುಮಾನ ಗೆಲ್ಲಲು ಸಾಧ್ಯವಾಗುವುದು ಎಂದು ತಿಳಿ ಹೇಳಿದರು.

ಮಿಲಾಗ್ರಿಸ್ ಕಾಲೇಜಿನ ಸಂಚಾಲಕರಾದ ವಂದ. ಗುರು. ಬೊನವೆಂಚರ್ ನಜರೆತ್ ಅವರು ಕ್ರೀಡಾ ಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷರಾದ ಶ್ರೀಯುತ ಅಲ್ಲೊನ್ಸಸ್ ಮಸ್ಕರೇನ್ಹಸ್, ಹಳೆ ವಿದ್ಯಾರ್ಥಿಯಾಗಿರುವ ಎಲ್ ಸ್ಟನ್ ವಾಸ್, ಸಂಯೋಜಕರು ಹಾಗೂ ದೈಹಿಕ ಶಿಕ್ಷಕರಾದ ಶ್ರೀಯುತ ಸಂದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ವಂದ ಗುರು. ಉದಯ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಮೈಕಲ್ ಸಾಂತೂಮಾಯೋರ್ ಸ್ವಾಗತಿಸಿದರು, ವಾಣಿಜ್ಯ ವಿಭಾಗದ ಮುಖ್ಯ ಸ್ಥರಾದ ಶ್ರೀಮತಿ ಗ್ಲಾನ್ಸಿ ಯ ಫೆರ್ನಾಂಡಿಸ್ ಹಾಗೂ ಉಪನ್ಯಾಸಕಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶೈಲಾ ಮೋರಸ್ ವಂದಿಸಿದರು.

Sneha Gowda

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

4 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

21 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

38 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

52 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago