ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್‌ಫೈನಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್​ನ ಪ್ರಿತಿಕಾ ಪವಾಡೆ ಮುಖಾಮುಖಿಯಾಗಿದ್ದರು.

ಅತ್ಯುತ್ತಮ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಮಣಿಕಾ ಬಾತ್ರಾ 11-9 ಸ್ಕೋರ್​ಗಳ ಅಂತರದಿಂದ ಗೆದ್ದುಕೊಂಡರು. ಇನ್ನು ದ್ವಿತೀಯ ಸೆಟ್​ನಲ್ಲಿ ಸಂಪೂರ್ಣ ಹಿಡಿತ ಸಾಧಿಸಿದ ಭಾರತೀಯ ತಾರೆ 11-6 ಅಂತರದಿಂದ ಸುಲಭವಾಗಿ ಜಯ ಸಾಧಿಸಿದರು.

ಅಲ್ಲದೆ ಒಲಿಂಪಿಕ್ ಗೇಮ್ಸ್‌ ಇತಿಹಾಸದಲ್ಲೇ ಸಿಂಗಲ್ಸ್ ಪ್ರೀ ಕ್ವಾರ್ಟರ್‌ಫೈನಲ್ ತಲುಪಿದ ಭಾರತದ ಮೊದಲ ಟೇಬಲ್ ಟೆನ್ನಿಸ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಮಣಿಕಾ ಬಾತ್ರಾ ಪಾತ್ರರಾಗಿದ್ದಾರೆ.