Categories: ಕ್ರೀಡೆ

ಕ್ರಿಕೆಟ್​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ ಮನೋಜ್ ತಿವಾರಿ

ಟೀಮ್ ಇಂಡಿಯಾ ಆಟಗಾರ ಮನೋಜ್ ತಿವಾರಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2008 ರಲ್ಲಿ ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ತಿವಾರಿ, ಆ ಬಳಿಕ ಟೀಮ್ ಇಂಡಿಯಾ ಪರ 15 ಪಂದ್ಯಗಳನ್ನಾಡಿದ್ದರು.

ಇದಲ್ಲದೆ ಈ ವರ್ಷದವರೆಗೆ ಅವರು ರಣಜಿ ಟೂರ್ನಿಯಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ವೃತ್ತಿ ಬದುಕಿಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅದರಂತೆ ಸೋಷಿಯಲ್ ಮೀಡಿಯಾ ಮೂಲಕ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ.

ತಮ್ಮ ವೃತ್ತಿಜೀವನದುದ್ದಕ್ಕೂ ಬೆಂಬಲಿಸಿದ ಪತ್ನಿ ಮತ್ತು ಅವರ ಮಾಜಿ ಸಹ ಆಟಗಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೆಅವರ ತರಬೇತುದಾರ ಮನಬೇಂದ್ರ ಘೋಷ್ ಅವರಿಗೆ ವಿಶೇಷ ಗೌರವವನ್ನು ಸಲ್ಲಿಸಿದ್ದಾರೆ.

ಮಾನಬೇಂದ್ರ ಘೋಷ್, ನನ್ನ ಕ್ರಿಕೆಟ್ ಪಯಣದಲ್ಲಿ ಆಧಾರ ಸ್ತಂಭವಾಗಿದ್ದಾರೆ. ಅವರು ಇಲ್ಲದಿದ್ದರೆ ನಾನು ಕ್ರಿಕೆಟ್ ವಲಯದಲ್ಲಿ ಎಲ್ಲಿಯೂ ತಲುಪುತ್ತಿರಲಿಲ್ಲ. ಧನ್ಯವಾದಗಳು ಸರ್… ನಿಮ್ಮ ಆರೋಗ್ಯವು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ನನ್ನ ತಂದೆ ಮತ್ತು ತಾಯಿಗೆ ಧನ್ಯವಾದಗಳು, ಅವರಿಬ್ಬರೂ ನನ್ನ ಅಧ್ಯಯನದತ್ತ ಗಮನಹರಿಸುವಂತೆ ನನ್ನ ಮೇಲೆ ಒತ್ತಡ ಹೇರಲಿಲ್ಲ. ಬದಲಿಗೆ ಅವರು ನನ್ನನ್ನು ಕ್ರಿಕೆಟ್‌ನಲ್ಲಿ ಮುಂದುವರಿಸಲು ಪ್ರೋತ್ಸಾಹಿಸಿದರು. ಯಾವಾಗಲೂ ನನ್ನ ಪರವಾಗಿ ನಿಂತ ನನ್ನ ಪತ್ನಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮನೋಜ್ ತಿವಾರಿ ಬರೆದುಕೊಂಡಿದ್ದಾರೆ.

https://www.instagram.com/p/CveRzImttqR/?utm_source=ig_embed&ig_rid=33932387-ecfd-4b06-9d0d-eec7b7d4e8c4

Ashitha S

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

5 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

42 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

46 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

59 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

59 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago