ಪ್ಯಾರಿಸ್: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟರ್ ಮನು ಭಾಕರ್, ಭಾರತಕ್ಕೆ ಮೂರನೇ ವೈಯಕ್ತಿಕ ಪದಕ ಗೆದ್ದು ಕೊಡುವ ಭರವಸೆ ಮೂಡಿಸಿದ್ದಾರೆ.
ಈ ಮೊದಲು 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಕಂಚಿನ ಪದಕ ಗೆದ್ದುಕೊಟ್ಟಿದ್ದ ಮನು, ಆ ಬಳಿಕ ಸರಬ್ಜೋತ್ ಸಿಂಗ್ ಜೊತೆಗೂಡಿ ಮಿಶ್ರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.
ಇದೀಗ ಮನು 25 ಮೀಟರ್ ಪಿಸ್ತೂಲ್ ಅರ್ಹತಾ ಸುತ್ತಿನ ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಗಳಿಸುವ ಮೂಲಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.

