ಮುಂಬೈ: ಕ್ರಿಕೆಟ್ ಲೋಕದ ಸವ್ಯಸಾಚಿ, ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಹೀಗೆ ಹಲವು ಹೆಸರಿನಿಂದ ಕರೆಸಿಕೊಳ್ಳುವ ಟೀಮ್ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪ್ರತಿಮೆ ನಾಳೆ (ನ.1ರಂದು) ವಾಂಖೆಡೆ ಸ್ಟೇಡಿಯಂನಲ್ಲಿ ಅನಾವರಣಗೊಳಿಸಲು ನಿರ್ಧರಿಸಲಾಗಿದೆ. ನ.2ರಂದು ಇಲ್ಲಿ ಭಾರತ ಮತ್ತು ಲಂಕಾ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ದಿನ ಸಚಿನ್ ಅವರ ಪ್ರತಿಮೆ ಅನಾವರಣ ಸಮಾರಂಭ ನಡೆಸಲು ಮುಂಬೈ ಕ್ರಿಕೆಟ್ ಅಸೋಸಿಯೇಸನ್ ಮತ್ತು ಬಿಸಿಸಿಐ ನಿರ್ಧರಿಸಿದೆ.
ʼಟೀಮ್ ಇಂಡಿಯಾ ಮತ್ತು ಮುಂಬೈ ಕ್ರಿಕೆಟ್ಗೆ ಸಚಿನ್ ತೆಂಡೂಲ್ಕರ್ ಅವರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ತೆಂಡೂಲ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ತೆಂಡೂಲ್ಕರ್ ಅವರೇ ಉಪಸ್ಥಿತರಿರಲಿದ್ದಾರೆ ಎಂದು ಅಮೋಲ್ ಕಾಳೆ ತಿಳಿಸಿದ್ದಾರೆ.
Sachin Tendulkar statue will be unveiled on November 1st at Wankhede stadium. [The Indian Express]
– An iconic moment in Indian cricket history. pic.twitter.com/8V7Gdsk78p
— Johns. (@CricCrazyJohns) October 24, 2023