ಮ್ಯಾಥ್ಸ್​ ಒಲಂಪಿಯಾಡ್​ನಲ್ಲಿ ಗೆದ್ದ ವಿದ್ಯಾರ್ಥಿಗಳಿ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಇತ್ತೀಚೆಗೆ ಯುನೈಟೆಡ್ ಕಿಂಗ್​ಡಮ್​ನಲ್ಲಿ ನಡೆದ ಅಂತರರಾಷ್ಟ್ರೀಯ ಗಣಿತ ಒಲಂಪಿಯಾಡ್ ಭಾರತದ ವಿದ್ಯಾರ್ಥಿಗಳು ನಾಲ್ಕು ಚಿನ್ನದ ಪದಕಗಳು, ಒಂದು ಬೆಳ್ಳಿ ಪದಕ ಮತ್ತು ಒಂದು ಗೌರವಾನ್ವಿತ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಈ ಮೂಲಕ ಮ್ಯಾಥ್ಯ್ ಒಲಿಂಪಿಯಾಡ್​​ನಲ್ಲಿ 4ನೇ ಶ್ರೇಯಾಂಕ ಅಲಂಕರಿಸಿ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದ ವಿದ್ಯಾರ್ಥಿಗಳಿಗೆ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.

ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಮೋದಿ, ಡೀ ವಿಶ್ವವು ಈಗ ಪ್ಯಾರಿಸ್ ಒಲಿಂಪಿಕ್ಸ್​ನತ್ತ ಮುಖ ಮಾಡಿದೆ. ಭಾರತೀಯ ಕ್ರೀಡಾಪಟುಗಳು ಕೂಡ ನಮ್ಮ ತ್ರಿವರ್ಣ ಧ್ವಜ ಹಾರಿಸುವ ವಿಶ್ವಾಸದಲ್ಲಿದ್ದಾರೆ. . ಇದರಲ್ಲಿ ನಮ್ಮ ವಿದ್ಯಾರ್ಥಿಗಳು ಸರ್ವಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಇವರು 4 ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗೆದ್ದಿದ್ದಾರೆ ಎಂದು  ಅಭಿನಂದನೆ ಸಲ್ಲಿಸಿದರು.