Categories: ಕ್ರೀಡೆ

ಮುಂಬೈ ಇಂಡಿಯನ್ಸ್‌ ತಂಡದೊಳಗೆ ಹಾರ್ದಿಕ್ ಪಾಂಡ್ಯ vs ರೋಹಿತ್ ಶರ್ಮ ಬಣ !

ನವದೆಹಲಿ: ಮುಂಬೈ ಇಂಡಿಯನ್ಸ್‌ ತಂಡದೊಳಗೆ ಹಾರ್ದಿಕ್ ಪಾಂಡ್ಯ vs ರೋಹಿತ್ ಶರ್ಮ ಬಣ ಶುರುವಾಗಿದೆ. ಹೌದು. . 17ನೇ ಆವೃತ್ತಿಗೂ ಮುನ್ನ ನಾಯಕನನ್ನು ಬದಲಿಸಿದ 5 ಬಾರಿಯ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದೊಳಗೆ ಎಲ್ಲವೂ ಸರಿ ಇದ್ದಂತೆ ಕಾಣುತ್ತಿಲ್ಲ.

ತಂಡದೊಳಗೆ ಈಗಾಗಲೇ ಎರಡು ಬಣಗಳಾಗಿವೆ ಎಂಬ ಮಾತುಗಳು ಕೇಳಿ ಬರುತಿವೆ. ಮಾಜಿ ನಾಯಕ ರೋಹಿತ್‌ ಶರ್ಮಾ ಬಣ ಒಂದು ಕಡೆಯಾದರೆ, ಹೊಸದಾಗಿ ನಾಯಕನಾಗಿ ನೇಮಕಗೊಂಡಿರುವ ಹಾರ್ದಿಕ್‌ ಪಾಂಡ್ಯ ಬಣ ಮತ್ತೊಂದು ಕಡೆ ಎಂದು ಹೇಳಲಾಗುತ್ತಿದೆ.

ರೋಹಿತ್‌ ಬಣದಲ್ಲಿ ಜಸ್‌ಪ್ರೀತ್‌ ಬುಮ್ರಾ, ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ ಸೇರಿ ಇನ್ನೂ ಹಲವರಿದ್ದರೆ, ಹಾರ್ದಿಕ್‌ ಪಾಂಡ್ಯ ಬಣದಲ್ಲಿ ಇಶಾನ್‌ ಕಿಶನ್‌ ಸೇರಿ ಕೆಲವು ಆಟಗಾರರಿದ್ದಾರೆ ಎನ್ನಲಾಗಿದೆ.ಇದೇ ವೇಳೆ ಹಾರ್ದಿಕ್‌ರ ನಾಯಕತ್ವದ ಬಗ್ಗೆ ತಂಡದ ಕೋಚ್‌ಗಳಿಗೂ ಅಸಮಾಧಾನವಿದ್ದು, ಪ್ರಮುಖವಾಗಿ ಬೌಲರ್‌ಗಳ ನಿರ್ವಹಣೆಯಲ್ಲಿ ಹಾರ್ದಿಕ್‌ ಪಾಂಡ್ಯ ಪದೇಪದೇ ಎಡವಟ್ಟು ಮಾಡುತ್ತಿರುವುದಕ್ಕೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ವರದಿಯಾಗಿದೆ.

ಹಾರ್ದಿಕ್‌ರ ಮೇಲೆ ಬೌಲಿಂಗ್‌ ಕೋಚ್‌ ಲಸಿತ್‌ ಮಾಲಿಂಗ ಸಿಟ್ಟು ಮಾಡಿಕೊಂಡು ಎದ್ದು ಹೋಗುವಂತೆ ಕಾಣುವ ವಿಡಿಯೋವೊಂದು ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ.

ಅಷ್ಟೇ ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಾಂಡ್ಯ vs ರೋಹಿತ್ ಶರ್ಮ ರಿಗೆ ಸಂಬಂಧಿಸಿದ ಆನೇಕ ವಿಡಿಯೋಗಳು ಐ ಪಿಎಲ್‌ ನಿಂದ ಹೊರ ಬರುತ್ತಲೇಯಿದೆ.

ಮುಂದಿನ ದಿಗಳಲ್ಲಿ ಮತ್ತೆ ನಾಯಕತ್ವ ಬದಲಾಗಬಹುದು. ರೋಹಿತ್‌ ಶರ್ಮಾ ಅವರನೇ ಮುಂಬೈ ಇಂಡಿಯಾನ್ಸ್‌ ತಂಡಕ್ಕೆ ನಾಯಕನಾಗಿ ತರಲು  ಟೀಂ ನಲ್ಲಿ ಚರ್ಚಿಯುತ್ತಿದೆ ಎಂಬ ಗುಸು ಗುಸು ಕೇಳಿ ಸದ್ದು ಮಾಡುತ್ತಿದೆ.

Ashitha S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago