ಜುಲೈ 26 ರಿಂದ ಪ್ಯಾರಿಸ್‌ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಗೇಮ್ಸ್ ಶೂಟಿಂಗ್ನಲ್ಲಿ ಪದಕ ಗೆದ್ದಿದ್ದ ಶ್ರೇಯಸಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಶ್ರೇಯಸಿ ಸಿಂಗ್, ದಿವಂಗತ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಅವರ ಪುತ್ರಿ. ಅಲ್ಲದೆ ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ. ಇದೀಗ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವ ಮೂಲಕ ಬಿಹಾರದಿಂದ ಆಯ್ಕೆಯಾದ ಏಕೈಕ ಸ್ಪರ್ಧಿ ಎನಿಸಿಕೊಂಡಿದ್ದಾರೆ.

